ಶಿವಮೊಗ್ಗ : ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಬೇಡ. ಪಕ್ಷಾತೀತವಾಗಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಇಲ್ಲಿನ ವಿನೋಬನಗರದ ಪಿಎನ್ಟಿ ಕಾಲೊನಿಯಲ್ಲಿ ನಿರ್ಮಾಣಗೊಂಡಿರುವ ರೈಲ್ವೆ ಅಂಡರ್ ಪಾಸ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಲಾಗಿದ್ದು, ಇದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾರ್ವಜನಿಕರ ಸಂಚಾರಕ್ಕೆ ಅಂಡರ್ ಪಾಸ್ ಮುಕ್ತವಾಗಿದೆ. ಈ ಭಾಗದಲ್ಲಿ ಕಳೆದ 1 ವರ್ಷದಿಂದ ತಲೆದೋರಿದ್ದ ಸಮಸ್ಯೆ ಬಗೆಹರಿದಿದೆ’ ಎಂದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ನಗರ ಘಟಕದ ಅಧ್ಯಕ್ಷ ಜಗದೀಶ್, ಎಸ್.ದತ್ತಾತ್ರಿ, ಮಾಲತೇಶ್, ಸುನೀತಾ ಅಣ್ಣಪ್ಪ, ಇ.ವಿಶ್ವಾಸ್, ಸುಮಿತ್ರಾ, ವಿ.ರಾಜು, ಚಿನ್ನಪ್ಪ, ಆಶಾಚಂದ್ರಪ್ಪ ಹಾಗೂ ಬಡಾವಣೆಯ ನಿವಾಸಿಗಳು ಪಾಲ್ಗೊಂಡಿದ್ದರು.