ಅರಸಾಳಿನಲ್ಲಿ ರೈಲು ನಿಲುಗಡೆ ಶಾಸಕ ಆರಗ ಜ್ಞಾನೇಂದ್ರ ಸಂತಸ,
ಬಹು ವರ್ಷಗಳ ಬೇಡಿಕೆಯಾಗಿದ್ದ ಅರಸಾಳು ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಇಂದಿನಿಂದ ಆರಂಭವಾಗಿದ್ದು ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.
ಬಹಳ ವರ್ಷಗಳಿಂದ ಈ ನಿಲುಗಡೆಗೆ ಪತ್ರ ಮುಖೇನ ಒತ್ತಾಯಿಸಿದ್ದನ್ನು ನೆನಪಿಸಿಕೊಂಡಿರುವ ಶಾಸಕರು, ತೀರ್ಥಹಳ್ಳಿ ಮತ್ತು ಹುಂಚ ಹೋಬಳಿಯ ಸಾರ್ವಜನಿಕರಿಗೆ ರೈಲು ಸೇವೆ ಹತ್ತಿರವಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಕೋರಿದ್ದಾರೆ.
ಅರಸಾಳು ಮತ್ತು ಕುಂಸಿ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಶ್ರಮವಹಿಸಿದ ಸಂಸದ ಬಿ ವೈ ರಾಘವೇಂದ್ರರವರನ್ನು ಶಾಸಕರು ಅಭಿನಂದಿಸಿದ್ದಾರೆ