POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು|district news

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು

ಗಾಜಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಪೊಲೀಸರಿಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫ್ರೀಡಂ ಪಾರ್ಕ್​ನಲ್ಲಿ 17 ವರ್ಷದ ಬಾಲಕಿಯೊಬ್ಬಳು, ಗಾಜಿನಿಂದ ತನ್ನ ಕೈಯಿಂದ ಕೊಯ್ದುಕೊಂಡು ಒದ್ದಾಡುತ್ತಿದ್ದಳು. ಈ ವೇಳೆ ERV ವಾಹನದಲ್ಲಿದ್ದ ಪೊಲೀಸ್ ಕಾನ್ಸ್​ಟೇಬಲ್​​ಗಳಾದ ರಾಘವೇಂದ್ರ ಹಾಗೂ ಚಾಲಕ ಚನ್ನಕೇಶವ ಅವರು ರಕ್ತದ ಮಡುವಿನಲ್ಲಿದ್ದ ಬಾಲಕಿಯನ್ನು ತಕ್ಷಣ ತಮ್ಮದೇ ವಾಹನದಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಬಾಲಕಿಯ ಜೀವ ಉಳಿದಿದೆ. ಈ ಇಬ್ಬರು ಪೊಲೀಸರು ಆಯಂಬುಲೆನ್ಸ್​ಗೆ ಕಾಯದೇ ಇಆರ್​ವಿ ವಾಹನದಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಸದ್ಯ ಬಾಲಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಪೊಲೀಸ್​ ಸಿಬ್ಬಂದಿಯ ಈ ಮಾನವೀಯ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಪೊಲೀಸರ ಸಮಯ ಪ್ರಜ್ಞೆಯನ್ನು ಎಸ್​ಪಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.