ರಿಪ್ಪನ್ಪೇಟೆ : ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸುಳ್ಳು ವದಂತಿ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.
ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪತ್ರೀಕಾಗೋಷ್ಟಿ ನಡೆಸಿ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕುಮಾರ್ ಬಂಗಾರಪ್ಪ ರವರು ಪಕ್ಷದ ನಿಷ್ಟಾವಂತ ಕಾರ್ಯಕರ್ತರು ಹಾಗೂ ರಾಜ್ಯ ವ್ಯಾಪ್ತಿಯಲ್ಲಿ ಸಂಘಟನೆಯ ಬಲವನ್ನು ಹೆಚ್ಚಿಸಿದವರಾಗಿದ್ದು ಅವರು ಕಾಂಗ್ರೆಸ್ ಸೇರ್ಪಡೆ ವಿಚಾರ ಕೇವಲ ಕಟ್ಟುಕಥೆಯಾಗಿದೆ ಎಂದರು.
ಚಂದ್ರಯಾನ -3 ಯಶಸ್ವಿ ಹಿಂದೆ ನಮ್ಮ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ರವರ ಅವಿರತ ಶ್ರಮವಿದ್ದು ವಿಕ್ರಮ್ ಲ್ಯಾಂಡರ್ ಕಾಲಿಟ್ಟ ಚಂದ್ರನ ಮೇಲ್ಮೈ ಪ್ರದೇಶಕ್ಕೆ ಶಿವಶಕ್ತಿ ಎಂದು ಹೆಸರಿಸಲಾಗಿದೆ ಇದು ಸೃಷ್ಟಿ ಇರುವವರೆಗೂ ಶಾಶ್ವತವಾಗಿರುತ್ತದೆ ಇದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದರು.
ಮಲೆನಾಡಿನ ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ರೈಲ್ವೆ ಪ್ರಯಾಣಿಕರಿಗೆ ಸದುಪಯೋಗವಾಗಲೆಂದು ಅರಸಾಳಿನ ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆಯಿಂದ ಅನುಮತಿ ದೊರೆತಿದೆ.ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಹೊಸನಗರ, ರಿಪ್ಪನ್ಪೇಟೆ, ಹುಂಚ, ಕೋಣಂದೂರು, ನಿಟ್ಟೂರು, ಯಡೂರು, ಮಾಸ್ತಿಕಟ್ಟೆ, ರಾಮಚಂದ್ರಪುರ, ಹೊಂಬುಜ, ಕೋಡೂರು, ಸೂಡೂರು, ಚಿನ್ನಮನೆ, ನಗರ ರೋಡ್ ,ಹೀಗೆ ಸುತ್ತಮುತ್ತಲಿನ ಊರಿನ ಪ್ರಯಾಣಿಕರು ಅರಸಾಳು ರೈಲ್ವೆ ನಿಲ್ದಾಣ ಸಮೀಪವಿದ್ದರು ರೈಲಿಗಾಗಿ ಆನಂದಪುರ ಹೋಗುವ ಅನಿವಾರ್ಯತೆ ಇತ್ತು.
ಸಾರ್ವಜನಿಕರ ಹಾಗೂ ಪ್ರಯಾಣಿಕರ ಬಹು ವರ್ಷಗಳಿಂದ ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಮಾಡುವಂತೆ ಅನೇಕ ಬಾರಿ ರಿಪ್ಪನ್ಪೇಟೆ, ಅರಸಾಳು ಗ್ರಾಮದ ನಾಗರಿಕರು ಹಲವಾರು ಬಾರಿ ಮನವಿ ಸಲ್ಲಿಸಿ ಹೋರಾಟಗಳನ್ನು ಮಾಡಿದ್ದರು.ಹಾಲಿ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಆರಗ ಜ್ಞಾನೇಂದ್ರ, ಮತ್ತು ಮಾಜಿ ಮಂತ್ರಿಗಳಾದ ಹರತಾಳು ಹಾಲಪ್ಪರವರ ಈ ರೈಲ್ವೆ ನಿಲುಗಡೆಗೆ ಮನವಿಯನ್ನು ಸಲ್ಲಿಸಿದ್ದರು.
ಕೇಂದ್ರ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ರವರು ಅರಸಾಳು ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದಾರೆ, ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಮಲೆನಾಡಿನ ಜನತೆಯ ಪರವಾಗಿ ಧನ್ಯವಾದಗಳು ಅರ್ಪಿಸುತ್ತೇನೆ. ದಿನಾ ನಾಲ್ಕು ಮುಖ್ಯ ರೈಲುಗಳು ಈ ನಿಲ್ದಾಣದಲ್ಲಿ ನಿಲ್ಲಲಿದೆ ಎಂದರು.
ಪ್ರಾಯೋಗಿಕವಾಗಿ ನೀಡಲಾಗುತ್ತಿರುವ ಈ ನಿಲುಗಡೆಯನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ಈ ನಿಲುಗಡೆಯನ್ನು ಮುಂದುವರೆಸುವ ಸಾಧ್ಯತೆಗಳಿರುವುದರಿಂದ ಪ್ರಯಾಣಿಕರು ಈ ಅಮೂಲ್ಯ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ತಾಲೂಕ್ ಅಧ್ಯಕ್ಷರಾದ ಗಣಪತಿ ಬೆಳಗೋಡು,ಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ ಮಂಜುನಾಥ್ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ,ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ,ಮುಖಂಡರಾದ ಮೆಣಸೆ ಆನಂದ್, ಕಗ್ಗಲಿ ಲಿಂಗಪ್ಪ, ಕೀರ್ತಿ ಗೌಡ, ರಾಜೇಶ್ ಜೈನ್, ಪದ್ಮ ಸುರೇಶ್, ಲೀಲಾ ಶಂಕರ್, ನಾಗರತ್ನ ದೇವರಾಜ್ ಇನ್ನಿತರರಿದ್ದರು.
		 
                         
                         
                         
                         
                         
                         
                         
                         
                         
                        
