ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ.
ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ.
ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಮಹಿಳೆಯು ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿಯೇ ಅವರ ಮೇಲೆ ಮುನ್ನಾ ಎಂಬಾತ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಮಹಿಳೆಯ ವಿಚಾರದಲ್ಲಿ ಈ ಹಿಂದೆಯು ಮುನ್ನಾ ಜಗಳ ತೆಗೆದಿದ್ದು, ವೈಯಕ್ತಿಕ ವಿಚಾರಕ್ಕೆ ಚಾಕುವಿನಿಂದ ಇರಿದಿದ್ಧಾನೆ ಎಂದು ಹೇಳಲಾಗುತ್ತಿದೆ.