POSTMAN NEWS

ನೈಜ ಸುದ್ದಿ ನೇರ ಬಿತ್ತರ..

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷರಾಗಿ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ|Ripponpet

ರಿಪ್ಪನ್‌ಪೇಟೆ ಗ್ರಾ.ಪಂ.ಅಧ್ಯಕ್ಷರಾಗಿ ಧನಲಕ್ಷ್ಮಿ  ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ

ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಸುಧೀಂದ್ರ ಪೂಜಾರಿ ಆಯ್ಕೆ ಯಾಗಿದ್ದಾರೆ.


21 ಸದಸ್ಯರನ್ನು ಹೊಂದಿರುವ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ,ಬಿಜೆಪಿ ಬೆಂಬಲಿತ ಸದಸ್ಯೆ ದೀಪಾ ಸುಧೀರ್  ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಆಸೀಫ಼್ ಭಾಷಾ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಸುಧೀಂದ್ರ ಪೂಜಾರಿ  ನಾಮಪತ್ರ ಸಲ್ಲಿಸಿದ್ದರು.


ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಧನಲಕ್ಷ್ಮಿ 12 ಮತಗಳನ್ನು ಪಡೆದರೆ ದೀಪಾ ಸುಧೀರ್ 9 ಮತಗಳನ್ನು ಪಡೆದಿದ್ದಾರೆ.

ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆಸೀಪ್ ಭಾಷಾ 10 ಮತ್ತು ಸುಧೀಂದ್ರ ಪೂಜಾರಿ 11 ಮತಗಳನ್ನು ಪಡೆದಿದ್ದಾರೆ.

ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಮಲ್ಲಿಕಾರ್ಜುನ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.