ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ. 
ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ ಕುರುಹು ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
 ಘಟನೆಯ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು, ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ಕೊಟ್ಟಿದ್ದು, ಸ್ಥಳದಲ್ಲಿನ ಹೆಜ್ಜೆ ಗುರುತುಗಳನ್ನ ಗಮನಿಸಿ ಚಿರತೆ ದಾಳಿ ನಡೆಸಿರಬಹುದು ಎಂದು ಶಂಕಿಸಿದ್ದಾರೆ.
		 
                         
                         
                         
                         
                         
                         
                         
                         
                         
                        

