Headlines

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು


ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. 

ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. 

ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *