ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸಂಭ್ರಮ – ಇಂಟರ್ ಸಿಟಿ ರೈಲು ನಿಲುಗಡೆ | ಆನ್ ಲೈನ್ ಬುಕ್ಕಿಂಗ್ ಪ್ರಾರಂಭ|malgudi

ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಸಂಭ್ರಮ – ಇಂಟರ್ ಸಿಟಿ ರೈಲು ನಿಲುಗಡೆ | ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಭ್ರಮದ ವಾತಾವರಣ.ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ಮೈಸೂರು – ಬೆಂಗಳೂರು – ತಾಳಗುಪ್ಪ ರೈಲು ನಿಲುಗಡೆ ನೀಡಿದ್ದು ಈ ಸಂಭ್ರಮಕ್ಕೆ ಕಾರಣ.

ರೈಲಿನ ಸ್ವಾಗತಕ್ಕೆ ನಿಲ್ದಾಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆಯೇ ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.


ಕಳೆದ ಹಲವಾರು ವರ್ಷಗಳಿಂದ ಈ ಮಾರ್ಗದಲ್ಲಿ ರೈಲು ಓಡಾಡುತಿದ್ದರೂ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡುತ್ತಿರಲಿಲ್ಲ. ಈ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ರೈಲ್ವೆ ಇಲಾಖೆಯೊಂದಿಗೆ ಪತ್ರ ವ್ಯವಹಾರ ನಡೆಸಿ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿರಲಿಲ್ಲ.

ಈ ಬಗ್ಗೆ ಮಾಜಿ ಶಾಸಕ ಹರತಾಳು ಹಾಲಪ್ಪ ಹಾಗೂ ಸಂಸದ ಬಿ ವೈ ರಾಘವೇಂದ್ರ ರವರಿಗೂ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಈ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದ ಸಂಸದ ಬಿ ವೈ ರಾಘವೇಂದ್ರ ರೈಲ್ವೆ ಇಲಾಖೆಯ ಸಚಿವರನ್ನು ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ರವರೊಂದಿಗೆ ದೆಹಲಿಯಲ್ಲಿ ಭೇಟಿಯಾಗಿ ಈ ಬಗ್ಗೆ ಮನವಿಯನ್ನು ಸಲ್ಲಿಸಿದ್ದರು.

ಬಹಳ ವರ್ಷಗಳ ಬೇಡಿಕೆ ಈಡೇರಿದ ಹಿನ್ನಲೆಯಲ್ಲಿ ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


ಈ ಸಂಧರ್ಭದಲ್ಲಿ ಅರಸಾಳು ರಂಗನಾಥ್ , ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ , ಬಿಜೆಪಿ ತಾಲೂಕ್ ಅಧ್ಯಕ್ಷ ಗಣಪತಿ ಬೆಳಗೋಡು ,ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ‌ ಮಂಜುನಾಥ್ ,ರಿಪ್ಪನ್‌ಪೇಟೆ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಮುಖಂಡರಾದ ಆರ್ ಟಿ ಗೋಪಾಲ್ ,ಮಂಜುಳಾ ಕೆ ರಾವ್ ,ಸುಂದರೇಶ್, ನಾಗಪ್ಪ , ಅರುಣ್ , ಪದ್ಮಾ ಸುರೇಶ್ ,ಶ್ವೇತಾ , ಸುಧೀರ್ ಪಿ ,ಕೀರ್ತಿ ಕೆ ಗೌಡ ,ರಾಜೇಶ್ ಜೈನ್ ,ರಾಜೇಂದ್ರ ಹಾಗೂ ಇನ್ನಿತರರಿದ್ದರು

ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಇಂದಿನಿನಿಂದ ಇಂಟರ್ ಸಿಟಿ ರೈಲು ಅರಸಾಳು ನಿಲ್ದಾಣದಲ್ಲಿ ನಿಲುಗಡೆಯಾಗುತಿದ್ದು ಆನ್ ಲೈನ್ ಬುಕ್ಕಿಂಗ್ ಪ್ರಾರಂಭವಾಗಿದೆ.ರೈಲ್ವೆ ಇಲಾಖೆಯಿಂದ ಇಲ್ಲಿ ರೈಲು ನಿಲುಗಡೆ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದ್ದರೂ ಆನ್ ಲೈನ್ ನಲ್ಲಿ ಬುಕ್ಕಿಂಗ್ ಪ್ರಾರಂಭಗೊಂಡಿರಲಿಲ್ಲ ಈ ಬಗ್ಗೆ ಹೊಸನಗರ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಸಂಸದ ಬಿ ವೈ ರಾಘವೇಂದ್ರ ರವರ ಗಮನಕ್ಕೆ ತಂದ ಹಿನ್ನಲೆಯಲ್ಲಿ ಇಂದಿನಿಂದ ಆನ್ ಲೈನ್ ಬುಕ್ಕಿಂಗ್ ಪ್ರಾರಂಭಗೊಂಡಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

2 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

2 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

5 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

5 hours ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

10 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

10 hours ago