ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಭ್ರಮದ ವಾತಾವರಣ.ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ಮೈಸೂರು – ಬೆಂಗಳೂರು – ತಾಳಗುಪ್ಪ ರೈಲು ನಿಲುಗಡೆ ನೀಡಿದ್ದು ಈ ಸಂಭ್ರಮಕ್ಕೆ ಕಾರಣ.
ರೈಲಿನ ಸ್ವಾಗತಕ್ಕೆ ನಿಲ್ದಾಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ನಿಲ್ದಾಣಕ್ಕೆ ರೈಲು ಬರುತ್ತಿದ್ದಂತೆಯೇ ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಕಳೆದ ಹಲವಾರು ವರ್ಷಗಳಿಂದ ಈ ಮಾರ್ಗದಲ್ಲಿ ರೈಲು ಓಡಾಡುತಿದ್ದರೂ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ನೀಡುತ್ತಿರಲಿಲ್ಲ. ಈ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ರೈಲ್ವೆ ಇಲಾಖೆಯೊಂದಿಗೆ ಪತ್ರ ವ್ಯವಹಾರ ನಡೆಸಿ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿರಲಿಲ್ಲ.
ಈ ಬಗ್ಗೆ ಮಾಜಿ ಶಾಸಕ ಹರತಾಳು ಹಾಲಪ್ಪ ಹಾಗೂ ಸಂಸದ ಬಿ ವೈ ರಾಘವೇಂದ್ರ ರವರಿಗೂ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಈ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದ ಸಂಸದ ಬಿ ವೈ ರಾಘವೇಂದ್ರ ರೈಲ್ವೆ ಇಲಾಖೆಯ ಸಚಿವರನ್ನು ಆರಗ ಜ್ಞಾನೇಂದ್ರ ಮತ್ತು ಹರತಾಳು ಹಾಲಪ್ಪ ರವರೊಂದಿಗೆ ದೆಹಲಿಯಲ್ಲಿ ಭೇಟಿಯಾಗಿ ಈ ಬಗ್ಗೆ ಮನವಿಯನ್ನು ಸಲ್ಲಿಸಿದ್ದರು.
ಬಹಳ ವರ್ಷಗಳ ಬೇಡಿಕೆ ಈಡೇರಿದ ಹಿನ್ನಲೆಯಲ್ಲಿ ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಸಂಧರ್ಭದಲ್ಲಿ ಅರಸಾಳು ರಂಗನಾಥ್ , ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ , ಬಿಜೆಪಿ ತಾಲೂಕ್ ಅಧ್ಯಕ್ಷ ಗಣಪತಿ ಬೆಳಗೋಡು ,ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ,ರಿಪ್ಪನ್‌ಪೇಟೆ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಮುಖಂಡರಾದ ಆರ್ ಟಿ ಗೋಪಾಲ್ ,ಮಂಜುಳಾ ಕೆ ರಾವ್ ,ಸುಂದರೇಶ್, ನಾಗಪ್ಪ , ಅರುಣ್ , ಪದ್ಮಾ ಸುರೇಶ್ ,ಶ್ವೇತಾ , ಸುಧೀರ್ ಪಿ ,ಕೀರ್ತಿ ಕೆ ಗೌಡ ,ರಾಜೇಶ್ ಜೈನ್ ,ರಾಜೇಂದ್ರ ಹಾಗೂ ಇನ್ನಿತರರಿದ್ದರು
ಆನ್ ಲೈನ್ ಬುಕ್ಕಿಂಗ್ ಪ್ರಾರಂಭ
ಇಂದಿನಿನಿಂದ ಇಂಟರ್ ಸಿಟಿ ರೈಲು ಅರಸಾಳು ನಿಲ್ದಾಣದಲ್ಲಿ ನಿಲುಗಡೆಯಾಗುತಿದ್ದು ಆನ್ ಲೈನ್ ಬುಕ್ಕಿಂಗ್ ಪ್ರಾರಂಭವಾಗಿದೆ.ರೈಲ್ವೆ ಇಲಾಖೆಯಿಂದ ಇಲ್ಲಿ ರೈಲು ನಿಲುಗಡೆ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದ್ದರೂ ಆನ್ ಲೈನ್ ನಲ್ಲಿ ಬುಕ್ಕಿಂಗ್ ಪ್ರಾರಂಭಗೊಂಡಿರಲಿಲ್ಲ ಈ ಬಗ್ಗೆ ಹೊಸನಗರ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಸಂಸದ ಬಿ ವೈ ರಾಘವೇಂದ್ರ ರವರ ಗಮನಕ್ಕೆ ತಂದ ಹಿನ್ನಲೆಯಲ್ಲಿ ಇಂದಿನಿಂದ ಆನ್ ಲೈನ್ ಬುಕ್ಕಿಂಗ್ ಪ್ರಾರಂಭಗೊಂಡಿದೆ.