ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ|DSS

ಖರ್ಗೆಯನ್ನು ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ

ಹೊಸನಗರ : ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು.




ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದಲಿತ ನಾಯಕರು ಕಾಂಗ್ರೆಸ್‌ನ ರಾಷ್ಟೀಯ ಅಧ್ಯಕ್ಷರೂ ಹಾಗೂ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಅವರ ಹಾವಭಾವ, ಅವರ ಬಣ್ಣದ ಬಗ್ಗೆ ವೈಯಕ್ತಿಕ ವಿಚಾರವನ್ನು ತೆಗೆದುಕೊಂಡು ಅವಮಾನಿಸಿದ್ದು ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಇಂಥಹ ಮನಸ್ಥಿತಿ ಇರುವಂಥಹ ಜನ ನಾಯಕರನ್ನು ಆಯ್ಕೆ ಮಾಡಿರುವಂಥಹ ನಾವುಗಳು ತಲೆ ತಗ್ಗಿಸುವಂಥ ಪರಿಸ್ಥಿತಿ ಬಂದಿದೆ. ಆದ್ದರಿಂದ ಇಂಥಹ ಕೆಟ್ಟ ನಾಯಕರು ನಮಗೆ ಬೇಡ ಇವರನ್ನು ತಕ್ಷಣದಿಂದ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಕೇಳಿಕೊಂಡರು.

ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕರಾದ ಡಿ. ಮಂಜುನಾಥ್, ನಾಗೇಂದ್ರ ಎಂ, ಉಮೇಶ್ ಹೊಸಮನೆ, ಸಂದೇಶ ಸಂಪೆಕಟ್ಟೆ, ನಾಗರಾಜ್ ಕೆ, ಇಂದಿರಾ ನಗರ, ಅಣಪ್ಪ ಕೆ.ಬಿ ಅರಳಸುರಳಿ, ಸುಬ್ರಹ್ಮಣ್ಯ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ ಹೊಸನಗರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.




ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

7 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago