ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್ ಫೈನ್! ಎಸ್ಪಿ ಹೇಳಿದ್ದೇನು ಗೊತ್ತಾ?
ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ರಸ್ತೆ ನಿಯಮ ಪಾಲನೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನ ಅಳವಿಡಸಲಾಗಿದ್ದು, ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಆ.28 ರಿಂದ ಆಟೋಮೆಟಿಕ್ ಫೈನ್ ವಿಧಿಸಿವುದರ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಮಿಥುನ್ ಕುಮಾರ್, ನಗರದಲ್ಲಿರುವ ಸರ್ಕಲ್ಗಳಲ್ಲಿ ಕ್ಯಾಮರಾಗಳನ್ನ ಅಳವಡಿಸಲಾಗಿದ್ದು, ಅದರಲ್ಲಿನ ದೃಶ್ಯಗಳು ಕೇಂದ್ರೀಕೃತ ಕಂಬೈಂಡ್ ಅಂಡ್ ಕಂಟ್ರೋಲ್ ಸೆಂಟರ್‌ಗೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದ್ದು ಸಂಚಾರಿ ನಿಯಮಗಳ ಉಲ್ಲಂಘನೆಯ ಮೇಲೆ ನಿಗಾ ಇಡಲಾಗುವುದು ಎಂದು ತಿಳಿಸಿದ್ದಾರೆ.
ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರೂ ಅದು ಕ್ಯಾಮರಾ ಮೂಲಕ ಕ್ಯಾಪ್ಚರ್ ಆಗುತ್ತದೆ. ಸಿಗ್ನಲ್ ಜಂಪ್ ಮಾಡಿದಾಗ ವಾಹನದ ಫೋಟೊ ಮತ್ತು ವೀಡಿಯೋ ತುಣುಕನ್ನು ಎಸ್‌ಎಡಿ ಕ್ಯಾಮೆರಾಗಳು ಸೆರೆಹಿಡಿಯುತ್ತವೆ. ಇದಲ್ಲದೆ ಹೆಲೈಟ್ ಧರಿಸದೆ ಇದ್ದರೆ, ಮೂವರು ಕುಳಿತು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದರೆ, ಮೊಬೈಲ್‌ನಲ್ಲಿ ಮಾತ ನಾಡುತ್ತಾ ವಾಹನ ಚಲಾಯಿಸುತ್ತಿದ್ದರೆ, ಒನ್, ನೋ ಎಂಟ್ರಿ, ನೋ ಪಾರ್ಕಿಂಗ್, ಕಾರಿನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಳ್ಳು ವುದು, ಹೀಗೆ ಯಾವುದೇ ರೀತಿಯ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ತಕ್ಷಣವೇ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಮತ್ತು ಮಾಲೀಕರ ವಿಳಾಸಕ್ಕೆ ಅಂಚೆ ಮೂಲಕ ನೋಟೀಸ್ ಕಳಿಸಲಾಗುತ್ತದೆ ಎಂದರು.