ಈದ್ ಮಿಲಾದ್ ಹಬ್ಬದ ವಿಚಾರದಲ್ಲಿ ಮಾರಾಮಾರಿ – ಓರ್ವನ ಕೊಲೆ
ಶಿಕಾರಿಪುರ : ಇಲ್ಲಿನ ಕೆಎಚ್ಪಿ ಕಾಲೋನಿಯಲ್ಲಿ ಈದ್ ಮಿಲಾದ್ ಆಚರಣೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು ಹಾಡು ಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಈದ್ ಮಿಲಾದ್ ಹಬ್ಬದ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದವರು ಸಭೆ ನಡೆದಿತ್ತು ಈ ವಿಚಾರವಾಗಿ ಅವರವರಲ್ಲಿಯೇ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ಗಲಾಟೆಯಲ್ಲಿ ಸೋಸೈಟಿ ಕೇರಿಯ ಮುಸ್ಲಿಂ ಯುವಕ ಜಾಫರ್ ಬಿನ್ ಸಬ್ಜನ್ ಸಾಬ್ 32 ವರ್ಷ ಕೊಲೆಯಾಗಿದ್ದಾನೆ ಎನ್ನಲಾಗಿದೆ.
ಏಕಾಏಕಿ ಎದೆಗೆ ಚಾಕುವಿಂದ ಇರಿದ ಪರಿಣಾಮ ಜಾಫರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ
ಈ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್