Headlines

ಉದ್ಯೋಗಾಂಕ್ಷಿಗಳ ಗಮನಕ್ಕೆ – ಆ.23ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606, 94820234129535312531 ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Exit mobile version