ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ ವಿರುದ್ಧ ಪ್ರತಿಭಟನೆ ನೆಡೆಸಿ ಮಾತನಾಡಿ ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಈ ಸಮಸ್ಯೆ ಇತ್ತು. ಗ್ರಾಮಸಭೆ ನೆಡೆಸಿ ರಿಪೋರ್ಟ್ ನೀಡಬೇಕೆಂದು ಹೇಳಿತ್ತು ಆದರೆ ಸಿದ್ದರಾಮಯ್ಯನವರ ಸರ್ಕಾರ ಈ ಕೆಲಸ ಮಾಡಿರಲಿಲ್ಲ. ಜಿಲ್ಲಾ ಮಟ್ಟದ ಸಭೆ ನೆಡೆಸಿ ವರದಿ ನೀಡಿದ್ರು. ಗ್ರಾಮಸಭೆ ನೆಡೆಸಿ ಸರಿಯಾದ ರೀತಿಯಲ್ಲಿ ವರದಿ ನೀಡಿದ್ದರೆ ಈ ರೀತಿ ಸಮಸ್ಯೆ ಬರುತ್ತಿರಲಿಲ್ಲ ಎಂದರು.

ಕೇಂದ್ರ ಪರಿಸರ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಕರೆದಿದ್ದರು. ಆ ಸಭೆಗೆ ನಾನು ಹೋಗಿದ್ದೆ. ನಾವು ಹೋಗಿದ್ದಾಗ ತಮಿಳುನಾಡು, ಕೇರಳ, ಮಹಾರಾಷ್ಟ್ರ ಮಂತ್ರಿಗಳು ಬಂದು ವಿರೋಧ ಮಾಡಿದ್ದರು. ಕರ್ನಾಟಕ ಪರ ನಾನೇ ಮಾತನಾಡಿದ್ದೆ ಒಂದು ವೇಳೆ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ. ದಯವಿಟ್ಟು ಹುಡುಗಾಟ ಮಾಡಬೇಡಿ ನಮ್ಮ ಬದುಕು ಅಲ್ಲಿದೆ. ಜಾರಿಗೆ ತರಲು ಹೊರಟಿದ್ದು ಯಾರು? ಜನರನ್ನ ಅಥವಾ ಅರಣ್ಯ ಅಧಿಕಾರಿಗಳನ್ನು ಕೇಳಿದ್ದಾನಾ? ಊರಿಗೆ ಬಂದು ಪ್ರವಾಸ ಮಾಡಿದ್ದಾನ? ಎಂದು ಪ್ರೆಶ್ನೆ ಮಾಡಿದ್ದಕ್ಕೆ ಪರಿಸರ ಸಚಿವರು ಸದ್ಯಕ್ಕೆ ಬೇಡ ಎಂದಿದ್ದರು ಎಂದರು.

ಪಶ್ಚಿಮ ಘಟ್ಟ ಉಳಿಸುವ ದೃಷ್ಟಿಯಿಂದ ಕಸ್ತೂರಿ ರಂಗನ್ ವರದಿ ಜಾರಿಗೆ ಕೊಡ್ತೀವಿ ಎಂದು ಈಶ್ವರ್ ಖಂಡ್ರೆ ಹೇಳುತ್ತಾರೆ. ದಯವಿಟ್ಟು ಅಧ್ಯಯನ ಮಾಡಿ. ನಿಮ್ಮ ಸರ್ಕಾರಕ್ಕೆ ಮಲೆನಾಡಿನಲ್ಲಿ ಗೆಲುವನ್ನು ಕೊಟ್ಟಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡಿದರೆ ಲೋಕಸಭೆ ಚುನಾವಣೆಯಲ್ಲಿ ನಿಮ್ಮನ್ನು ಊರಿಗೂ ಜನರು ಸೇರಿಸುವುದಿಲ್ಲ ಎಂದರು.


ಇದು ಹೋರಾಟದ ಮೊದಲ ಹೆಜ್ಜೆ. ಮುಂದೆಯೂ ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಹೊರಟರೆ ಮುಂದಿನ ದಿನದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಾಲೇಕೊಪ್ಪ ರಾಮಚಂದ್ರ, ಆರ್ ಮದನ್, ಬೇಗುವಳ್ಳಿ ಸತೀಶ್, ನವೀನ್ ಹೆದ್ದೂರು, ರಕ್ಷಿತ್ ಮೇಗರವಳ್ಳಿ, ಗೀತಾ ಸದಾನಂದ ಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

5 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago