ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ನರಸಪ್ಪ(75) ರವರು ಹೃದಯ ಸಮಸ್ಯೆ ಖಾಯಿಲೆಯಿಂದ ನಿಧನರಾಗಿದ್ದಾರೆ.
ಇತ್ತೀಚಿಗೆ ನರಸಪ್ಪ ರವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮಂಗಳವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ನರಸಪ್ಪ ರವರು ಕೆಂಚನಾಲ ಮಾರಿಕಾಂಬಾ ಜಾತ್ರಾ ಸಮಿತಿಯಲ್ಲಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.
ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ :
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬೆಳಂದೂರು ನರಸಪ್ಪ ನಿಧನಕ್ಕೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ಮುಖಂಡರಾದ ಕಲಗೋಡು ರತ್ನಾಕರ್, ಬಿ ಪಿ ರಾಮಚಂದ್ರ ,ಈಶ್ವರಪ್ಪ ಗೌಡ ,ಮಹಮ್ಮದ್ ಷರೀಫ್ ಸಾಬ್ , ಜಿ ಆರ್ ಗೋಪಾಲಕೃಷ್ಣ ಹಾಗೂ ಕೆಂಚನಾಲ ಗ್ರಾಪಂ ಅಧ್ಯಕ್ಷರು ,ಉಪಾದ್ಗ್ಯಕ್ಷರು ಮತ್ತು ಸದಸ್ಯರು ಸಂತಾಪ ಸೂಚಿಸಿದ್ದಾರೆ.