ತೀರ್ಥಹಳ್ಳಿಯಲ್ಲಿ ಕೋಳಿ ಅಂಕದ ಆಟ ನಡೆಸ್ತಿದ್ದವರ ಮೇಲೆ ಪೊಲೀಸರ ದಾಳಿ
ತೀರ್ಥಹಳ್ಳಿ: ತಾಲ್ಲೂಕಿನಲ್ಲಿ ಈಗ ಅನೇಕ ದಂಧೆ, ಅಕ್ರಮ ಚಟುವಟಿಕೆಗಳು ಶುರುವಾಗಿದೆ. ಒಂದು ಕಡೆ ಕಳ್ಳತನ, ಅತ್ಯಾಚಾರದಂತಹ ಚಟುವಟಿಕೆ ನಡುವೆ ಇದೀಗ ಕೋಳಿ ಪಡೆ, ಇಸ್ಪೀಟ್, ಆನ್ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಈಗಾಗಲೇ ಇದರಿಂದ ನೂರಾರು ಕುಟುಂಬಗಳು ಕಣ್ಣೀರು ಹಾಕುತ್ತಿವೆ.
ಈ ನಡುವೆ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸರು ಕೋಳಿ ಅಂಕ ನಡೆಸ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹಲವರನ್ನ ವಶಕ್ಕೆ ಪಡೆದಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಬೈಲ್ ನಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಾಳೂರು ಪೊಲೀಸ್ ಸ್ಟೇಷನ್ ಪೊಲೀಸರು ದಾಳಿ ನಡೆಸಿದ್ದಾರೆ.
ಅಂಕಕ್ಕೆ ಬಳಸಿದ್ದ ಕೋಳಿ ಹಾಗೂ ಅದಕ್ಕೆ ಸಂಬಂಧಿಸಿದವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ.