ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಹೊಳಲೂರಿನ ಸದ್ದಾಂ ಹುಸೇನ್ @ ಸಾಂಬಾ, 30 ವರ್ಷ, ಈತನನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿತನಿಂದ ಅಂದಾಜು ಮೌಲ್ಯ 20,000/- ರೂ ಗಳ 338 ಗ್ರಾಂ ತೂಕದ ಒಣ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತನ ವಿರುಧ್ದ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0086/23 ಕಲಂ 20(b) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಸದರಿ ಪೊಲೀಸ್ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.