ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ
ರಿಪ್ಪನ್‌ಪೇಟೆ;- ಪಟ್ಟಣದ ಸಾಗರ ರಸ್ತೆಯ ನಿವಾಸಿಯಾಗಿರುವ ಶಿವಮೊಗ್ಗ ಜಿಲ್ಲಾ ರೈತ ಮುಖಂಡ ಹಾಗೂ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್.ಎನ್.ಮಂಜಪ್ಪ (೮೯) ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ.
ಮೃತ ಮಂಜಪ್ಪನವರು ಜಿಲ್ಲಾ ರೈತ ಸಂಘಟನೆಯಲ್ಲಿ ಮತ್ತು ರೈತ ಹೋರಾಟ ಹಾಗೂ ಚಳುವಳಿಯಲ್ಲಿ ಪ್ರಮುಖ ರೂವಾರಿಯಾಗಿ ಇದ್ದರು. ರೈತರ ಪರವಾಗಿ ನೂರಾರು ಭಾರಿ ಹೋರಾಟ ನಡೆಸಿದ ಇವರು ರೈತರ ಹಿತಕ್ಕಾಗಿ ಅನೇಕ ಬಾರಿ ಜೈಲಿಗೂ ಸಹ ಹೋಗಿದ್ದರು. ಮೂಲತಃ ಕೃಷಿಕರಾಗಿದ್ದ ಇವರು ಟೈಲರ್ ವೃತ್ತಿಯೊಂದಿಗೆ ರಿಪ್ಪನ್ ಪೇಟೆ ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದು ರಾಷ್ಟçಸೇನಾ ಸೇವಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಜಿಲ್ಲಾ ರೈತಸಂಘದ ಮುಖಂಡರಾಗಿದ್ದ ಇವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ.ಮೃತರಿಗೆ ನಾಲ್ವರು ಪುತ್ರರಿದ್ದಾರೆ.
ಸಂತಾಪ;-
ಶಿವಮೊಗ್ಗ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷರಾದ ಆರ್ ಎನ್ ಮಂಜಪ್ಪ ರವರ ನಿಧನಕ್ಕೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ, ಮಾಜಿ ಸಚಿವ ಹರತಾಳು ಹಾಲಪ್ಪ,ರೈತಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ,. ಹಿಂದೂ ಮಹಾಸಭಾ ಸೇವಾ ಸಮಿತಿಯ ಗೌರವಾಧ್ಯಕ್ಷ ವೈ.ಜೆ.ಕೃಷ್ಣ. ಪಟ್ಟಣದ ಸಿದ್ಧಿ ವಿನಾಯಕ ದೇವಸ್ಥಾನ ಸಮಿತಿಯ ಅಧ್ಯಕ್ಷ ಈಶ್ವರ ಶೆಟ್ಟಿ, ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಬಿ ಲಕ್ಷ್ಮಣಗೌಡ, ಜೆಡಿಎಸ್ ಮುಖಂಡ ಆರ್. ಎ. ಚಾಬುಸಾಬ್. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಲ್. ವೆಂಕಟೇಶ್, ಪಿ.ರಮೇಶ್, ರಿಪ್ಪನ್ ಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ಗೌಡ,ಗ್ರಾಪಂ ಸದಸ್ಯರಾದ ಆಸೀಫ಼್ ಭಾಷಾ,ಸುಧೀಂದ್ರ ಪೂಜಾರಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್