ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ
ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ.
ಎಸ್ಪಿ ಮಿಥುನ್ ಕುಮಾರ್ ಹಾಗೂ ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.
ದಾಳಿ ವೇಳೆ ಅಂದಾಜು ಒಂದು ಲಕ್ಷ ರೂ. ಮೌಲ್ಯದ ಒಂದು ಡಬಲ್ ಬ್ಯಾರಲ್ ಬಂದೂಕು, 25 ಸಾವಿರ ರೂ. ಮೌಲ್ಯದ 310 ಜೀವಂತ ಗುಂಡುಗಳು, ಒಂದು ಕತ್ತಿ, ಒಂದು ಚಾಕು, 3 ಕಾಡು ಕೋಣ ಕೊಂಬಿನ ಟ್ರೋಫಿ, 6 ಜಿಂಕೆ ಕೊಂಬಿನ ಟ್ರೋಫಿ, 1 ಸಿ.ಸಿ ಡಿವಿಆರ್, 51 ಬಿಯರ್ ಟಿನ್, 1 ಲಕ್ಷ ಮೌಲ್ಯದ ವಿದೇಶಿ ಮದ್ಯದ ಬಾಟಲಿಗಳು, 6 ಬ್ರೀಜರ್ ಬಾಟಲ್ ಹಾಗೂ 3 ಲೀ. ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ತೀರ್ಥಹಳ್ಳಿ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ, ತೀರ್ಥಹಳ್ಳಿ ಪಿಐ ಅಶ್ವಥ್ ಗೌಡ, ತೀರ್ಥಹಳ್ಳಿ ಪಿಎಸ್‌ಐ ಸಾಗರದ ಅತ್ತರವಾಲ, ಮಾಳೂರು ಪಿಎಸ್‌ಐ ನವೀನ್ ಕುಮಾರ್ ಮಠಪತಿ, ಆಗುಂಬೆ ಪಿಎಸ್‌ಐ ರಂಗನಾಥ ಅಂತರಗಟ್ಟಿ, ರಿಪ್ಪನಪೇಟೆ ಪಿಎಸ್‌ಐ ಪ್ರವೀಣ್ ಹಾಗೂ 50 ಜನ ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆದರೆ ದಾಳಿಯ ವೇಳೆ ಯಾರನ್ನು ಬಂಧಿಸಲಾಗಿದೆ?, ಅಥವಾ ರೆಸಾರ್ಟ್ನಲ್ಲಿ ಇದ್ದವರು ಪರಾರಿಯಾಗಿದ್ದಾರಾ? ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ.