ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ|police raid

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ

ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ.

ಎಸ್​ಪಿ ಮಿಥುನ್​ ಕುಮಾರ್ ಹಾಗೂ ಎಎಸ್​ಪಿ ಅನಿಲ್ ಕುಮಾರ್ ಭೂಮರೆಡ್ಡಿ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.

ದಾಳಿ ವೇಳೆ ಅಂದಾಜು ಒಂದು ಲಕ್ಷ ರೂ. ಮೌಲ್ಯದ ಒಂದು ಡಬಲ್ ಬ್ಯಾರಲ್ ಬಂದೂಕು, 25 ಸಾವಿರ ರೂ. ಮೌಲ್ಯದ 310 ಜೀವಂತ ಗುಂಡುಗಳು,‌ ಒಂದು ಕತ್ತಿ, ಒಂದು ಚಾಕು, 3 ಕಾಡು ಕೋಣ ಕೊಂಬಿನ ಟ್ರೋಫಿ, 6 ಜಿಂಕೆ ಕೊಂಬಿನ ಟ್ರೋಫಿ, 1 ಸಿ.ಸಿ ಡಿವಿಆರ್, 51 ಬಿಯರ್ ಟಿನ್, 1 ಲಕ್ಷ ಮೌಲ್ಯದ ವಿದೇಶಿ ಮದ್ಯದ ಬಾಟಲಿಗಳು, 6 ಬ್ರೀಜರ್ ಬಾಟಲ್ ಹಾಗೂ 3 ಲೀ. ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

ತೀರ್ಥಹಳ್ಳಿ ವಿಭಾಗದ ಡಿವೈಎಸ್​ಪಿ ಗಜಾನನ ವಾಮನ ಸುತಾರ, ತೀರ್ಥಹಳ್ಳಿ ಪಿಐ ಅಶ್ವಥ್ ಗೌಡ, ತೀರ್ಥಹಳ್ಳಿ ಪಿಎಸ್‌ಐ ಸಾಗರದ ಅತ್ತರವಾಲ, ಮಾಳೂರು ಪಿಎಸ್‌ಐ ನವೀನ್ ಕುಮಾರ್ ಮಠಪತಿ, ಆಗುಂಬೆ ಪಿಎಸ್‌ಐ ರಂಗನಾಥ ಅಂತರಗಟ್ಟಿ, ರಿಪ್ಪನಪೇಟೆ ಪಿಎಸ್‌ಐ ಪ್ರವೀಣ್ ಹಾಗೂ 50 ಜನ ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದರೆ ದಾಳಿಯ ವೇಳೆ ಯಾರನ್ನು ಬಂಧಿಸಲಾಗಿದೆ?, ಅಥವಾ ರೆಸಾರ್ಟ್​ನಲ್ಲಿ ಇದ್ದವರು ಪರಾರಿಯಾಗಿದ್ದಾರಾ? ಎಂಬುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 hour ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

21 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

23 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago