ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ|Life imprisonment

ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದ  ಪತಿ ಮತ್ತು ಆತನ ಸ್ನೇಹಿತರಿಗೆ ಜೀವಾವಧಿ ಶಿಕ್ಷೆ
ಶಿವಮೊಗ್ಗ : ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಮತ್ತು ತಲಾ 1 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ ನಗರದ ವೆಂಕಟೇಶ್ವರ ನಗರದ 5ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ.(28) ಇವರು ಶ್ರೀರಾಮನಗರದ ವಾಸಿ ರೇವತಿ(21) ವರ್ಷ ಶಿವಮೊಗ್ಗ ಇವರನ್ನು 2017 ರ ಸೆ. 4 ರಂದು ಮದುವೆಯಾಗಿದ್ದರು.

ಪತ್ನಿ ರೇವತಿ ಕಾರ್ತಿಕನೊಂದಿಗೆ ಜಗಳ ಆಡಿಕೊಂಡು ಮನೆ ಬಿಟ್ಟು ಹೋಗಿದ್ದಳು. ತನ್ನ ಪತ್ನಿ ರೇವತಿಯು ತನ್ನ ಮನೆಯ ಎದುರು ಇರುವ ವಿಜಯ ಎಂಬುವನನ್ನು ಪ್ರೀತಿಸುತ್ತಿದ್ದರಿಂದ ಮನೆ ಬಿಟ್ಟು ಹೋಗಿರುತ್ತಾಳೆಂದು ಆರೋಪಿ ಕಾರ್ತಿಕ ತನ್ನ ಗೆಳೆಯರಾದ 2ನೇ ಆರೋಪಿ ಭರತ್ ವಿ.(23), 3ನೇ ಆರೋಪಿ ಸತೀಶ್(26) ಮತ್ತು 4ನೇ ಆರೋಪಿ ಸಂದೀಪ(21) ಇವರೊಂದಿಗೆ ಸೇರಿಕೊಂಡು 2017 ರ ಅ. 1 ರಂದು ತನ್ನ ಪತ್ನಿ ಮತ್ತು ವಿಜಯನನ್ನು ವಡ್ಡಿನಕೊಪ್ಪಕ್ಕೆ ಕರೆಸಿಕೊಂಡು ಮಚ್ಚು, ಲಾಂಗು ಮತ್ತು ಕಲ್ಲಿನಿಂದ ಥಳಿಸಿ ಕೊಲೆ ಮಾಡಿದ್ದರು.

ಈ ಬಗ್ಗೆ ಶಿವಮೊಗ್ಗ ತುಂಗಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖಾಧಿಕಾರಿ ಪೊಲೀಸ್ ಸರ್ಕಲ್ ಇನ್ಸ್‍ಪೆಕ್ಟರ್ ಮಹಾಂತೇಶ್ ಬಿ ಹೊಳಿ ಅವರು ತನಿಖೆ ಪೂರೈಸಿ ಆರೋಪಿಗಳಾದ ಕಾರ್ತಿಕ್, ಭರತ್, ಸತೀಶ್, ಸಂದೀಪ್ ಇವರುಗಳ ವಿರುದ್ದ ಭಾ.ದಂ.ಸಂಹಿತೆ ಕಲಂ 302, 120(ಬಿ)ಸಹವಾಚಕ 34 ರಡಿಯಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣವು ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ದಾಖಲಾಗಿ ವಿಚಾರಣೆ ನಡೆದು, ಆರೋಪಗಳು ದೃಢಪಟ್ಟಿರುವುದರಿಂದ ಆರೋಪಿತರಿಗೆ 1ನೇ ಮತ್ತು 3ನೇ ಅಪರ ಜಿಲ್ಲಾ ಮತ್ತು ನ್ಯಾಯಾಧೀಶರಾದ ಕೆ.ಎಸ್. ಮಾನು ಅವರು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಈ ಪ್ರಕರಣದ 3ನೇ ಆರೋಪಿ ಸತೀಶ್ ಬಿನ್ ಗೋವಿಂದರಾಜ ತಲೆಮರೆಸಿಕೊಂಡಿರುವುದರಿಂದ ಈತನನ್ನು ಪ್ರಕರಣದಿಂದ ಪ್ರತ್ಯೇಕಿಸಿ, ಪ್ರತ್ಯೇಕ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದು ಈತನ ಮೇಲಿನ ವಿಚಾರಣೆ ಬಾಕಿ ಇರುತ್ತದೆ.

ಸರ್ಕಾರಿ ಅಭಿಯೋಜಕರಾದ ಜೆ.ಶಾಂತರಾಜ್ ಸರ್ಕಾರದ ಪರವಾಗಿ ಸಾಕ್ಷಿಗಳ ವಿಚಾರಣೆ ಮಾಡಿ ವಾದವನ್ನು ಮಂಡಿಸಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

7 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

9 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

16 hours ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

1 day ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

1 day ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

1 day ago