ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !?
ತೀರ್ಥಹಳ್ಳಿ : ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತ ಹಾಗೂ ಬಸವಾನಿ ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿರುವ ಕೆ.ಟಿ.ರತ್ನಾಕರ್ ತಮಗೆ ಕೊಲೆ ಬೆದರಿಕೆ ಇದೆ ಎಂದು ಮೂವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೂಲತಃ ತಾಲೂಕಿನ ಬಂಡಿಗಡಿ ಗ್ರಾಮದ ನಿವಾಸಿಯಾಗಿರುವ ಕೆ.ಟಿ.ರತ್ನಾಕರ್ ಅವರು ಶಶಿಕಾಂತ್ ಅತ್ತಿಕೊಡಿಗೆ, ಸ್ಕಂದ ಮತ್ತು ಶ್ರೀಕಾಂತ್ ಅತ್ತಿಕೊಡಿಗೆ ಎಂಬವರು ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಂಡಿರುವುದರಿಂದ ನನ್ನ ಕೊಲೆ ಮಾಡಿಸುವ ಮತ್ತು ಕೊಲೆ ಪ್ರಯತ್ನದ ಉದ್ದೇಶ ಹೊಂದಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಯಾವುದೇ ಸಮಯದಲ್ಲಿ ತಮಗೂ ಹಾಗೂ ತಮ್ಮ ಕುಟುಂಬದವರಿಗೂ ಜೀವಕ್ಕೆ ತೊಂದರೆ ಇರುವ ಸಂಭವವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನಲೆಯಲ್ಲಿ ರತ್ನಾಕರ್ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಬೆದರಿಕೆಯ ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಪ್ರಕರಣ ಕುರಿತು ನ್ಯಾಯಾಲಯದ ಆದೇಶವೊಂದು ಹೊರಬಿದ್ದಿದೆ. ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಠಾಣಾಧಿಕಾರಿಗೆ ನ್ಯಾಯಾಲಯ ಆದೇಶಿಸಿದ್ದರಿಂದ ಈ ಪ್ರಕರಣ ಗಂಭೀರತೆ ಪಡೆದುಕೊಂಡಿದೆ.
ಮಾಹಿತಿಯ ಪ್ರಕಾರ ಮೊದಲ ಬಾರಿಗೆ ಬಸವಾನಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದ ಕೆ.ಟಿ.ರತ್ನಾಕರ್ ಎರಡನೇ ಬಾರಿಗೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.
ಎದುರಾಳಿಗಳು ಫೇಸ್ ಬುಕ್ ನಲ್ಲಿ ರತ್ನಾಕರ್ ವಿರುದ್ಧ ಕೆಲ ಪೋಸ್ಟ್ ಗಳನ್ನು ಹರಿಬಿಟ್ಟಿದ್ದು ಇದು ರತ್ನಾಕರ್ ಅವರ ಬದುಕಿಗೆ ಬೆದರಿಕೆಯಂತೆ ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ರತ್ನಾಕರ್ ಕೊಲೆ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್