ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ – ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್|malgudi

ಮಾಲ್ಗುಡಿಯಲ್ಲಿ ರೈಲು ನಿಲುಗಡೆ ಸ್ವಾಗತಾರ್ಹ –  ಜನರಲ್ಲಿ ಜಾಗೃತಿ ಅವಶ್ಯ : ಕಲಗೋಡು ರತ್ನಾಕರ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲುಗಳು ನಿಲಗಡೆಯಾಗುತ್ತಿರುವುದು ಸಂತಸದ ವಿಷಯವಾಗಿದ್ದು ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಜನರಿಗೆ ಈ ರೈಲ್ವೆ ನಿಲ್ದಾಣದ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು.

ರಿಪ್ಪನಪೇಟೆ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸನಗರ ತೀರ್ಥಹಳ್ಳಿ ತಾಲ್ಲೂಕಿನ  ಪ್ರಯಾಣಿಕರು ಈ ನಿಲ್ದಾಣವನ್ನು ಹೆಚ್ಚಾಗಿ ಬಳಸಿಕೊಳ್ಳುವುದರ ಮೂಲಕ ಈ ನಿಲ್ದಾಣದ ಸದುಪಯೋಗವನ್ನು ಪಡೆದುಕೊಂಡು ಪ್ರಾಯೋಗಿಕ ಅವಧಿಯಿಂದ ಶಾಶ್ವತ ನಿಲ್ದಾಣವನ್ನಾಗಿ ಪರಿವರ್ತಿಸಬೇಕಾಗಿದೆ ಎಂದರು.

ರೈಲು ನಿಲುಗಡೆಯಿಂದ ಹುಂಚ, ಕೋಣಂದೂರು, ಹೊಸನಗರ,ರಿಪ್ಪನ್ ಪೇಟೆ,ನಗರ, ನಿಟ್ಟೂರು, ಮಾಸ್ತಿ ಕಟ್ಟೆ ಇನ್ನು ಮುಂತಾದ ಊರಿನ  ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ. ಪ್ರವಾಸಿ ತಾಣವಾದ ಕೊಡಚಾದ್ರಿ, ಹೊಂಬುಜ ಜೈನ ಕ್ಷೇತ್ರ, ಕೊಲ್ಲೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ, ಭಕ್ತಾದಿಗಳಿಗೆ ಅನುಕೂಲಕರವಾಗಲಿದೆ ಎಂದರು.

ರೈಲ್ವೆ ನಿಲುಗಡೆಗೆ ಶ್ರಮವಹಿಸಿದ ಸಂಸದ ಬಿ ವೈ ರಾಘವೇಂದ್ರ, ಹಾಲಿ ಹಾಗೂ ಮಾಜಿ ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಅವರು ತಾಳಗುಪ್ಪ ಬೆಂಗಳೂರು – ಮೈಸೂರು ಮಾರ್ಗದಲ್ಲಿ ಸಂಚರಿಸುವ ಎಲ್ಲಾ ರೈಲುಗಳಿಗೆ ಅರಸಾಳುವಿನ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಬೇಕು.ಈ ಹಿನ್ನಲೆಯಲ್ಲಿ ಸಂಸದರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಿದ್ದೇವೆ ಎಂದರು.

ಮಾಲ್ಗುಡಿ ರೈಲ್ವೆ ನಿಲ್ದಾಣದ ಅಗತ್ಯತೆಯ ಬಗ್ಗೆ ಹೊಸನಗರ ತೀರ್ಥಹಳ್ಳಿ ತಾಲ್ಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯ ಜನರಲ್ಲಿ ಜಾಗೃತಿ ಮೂಡಿಸಲು ಎರಡು ತಾಲೂಕಿನ ಗ್ರಾಪಂ ಅಧ್ಯಕ್ಷರ ಒಕ್ಕೂಟದೊಂದಿಗೆ ಚರ್ಚಿಸಿ ರೂಪುರೇಷೆಗಳನ್ನು ಹಾಕಿಕೊಳ್ಳಲಾಗುವುದು ಎಂದರು.

ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ಮಾತನಾಡಿ ಹಲವು ದಿನಗಳ ಹೋರಾಟದ ಹಿನ್ನಲೆಯಲ್ಲಿ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆ.ಇದಕ್ಕೆ ಶ್ರಮಿಸಿದ ಸಂಸದರು,ಹಾಲಿ ಹಾಗೂ‌ಮಾಜಿ ಶಾಸಕರುಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗ್ರಾಪಂ ಸದಸ್ಯರಾದ ಮಧುಸೂಧನ್, ಗಣಪತಿ,  ಪ್ರಕಾಶ್ ಪಾಲೇಕರ್,ಬಾಳೂರು ಗ್ರಾಪಂ ಸದಸ್ಯ ರಾಜು ಹೆಚ್ ಎಸ್ ಕಾಂಗ್ರೆಸ್ ಮುಖಂಡರಾದ ರವೀಂದ್ರ ಕೆರೆಹಳ್ಳಿ,ಜಿ ಆರ್ ಗೋಪಾಲಕೃಷ್ಣ, ಉಲ್ಲಾಸ್, ಫ್ಯಾನ್ಸಿ ರಮೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

8 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

12 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

13 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

16 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

17 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

2 days ago