ರಿಪ್ಪನ್ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ವಿವಿದೆಡೆ ಒಣಗಲು ಹಾಕಿದ್ದ 4 ಕ್ವಿಂಟಲ್ ಗೂ ಅಧಿಕ ರಬ್ಬರ್ ಶೀಟ್ ಗಳನ್ನು ಬುಧವಾರ ರಾತ್ರಿ ಕಳ್ಳರು ಅಪಹರಿಸಿದ್ದಾರೆ.
ಬೆಳಂದೂರು ಗ್ರಾಮದ ಬಿ.ಟಿ. ಪ್ರಕಾಶ್ ಅವರ ಮನೆಯಲ್ಲಿ 160 ಕೆ.ಜಿ. ಹಾಗೂ ಪುಟ್ಟಸ್ವಾಮಿಗೌಡ ಅವರ ಮನೆಯಲ್ಲಿ 150 ಕೆಜಿ ಕೆ ಜಿ, ತಳಲೆ ಜಾರ್ಜ್ ಅವರ ಮನೆಯಲ್ಲಿ 50 ಕೆಜಿ,ಗವಟೂರು ಗ್ರಾಮದ ಅಲೆಕ್ಸ್ ಎಂಬುವವರ 50 ಮನೆಗಳಿಂದ ಸರಾಸರಿ 400 ಕೆ.ಜಿ. ಗೂ ಅಧಿಕ ರಬ್ಬರ್ ಶೀಟ್ ಕಳ್ಳತನವಾದ ಕುರಿತು ಒಂದೇ ದಿನ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಿಸಿಟಿವಿ ಅಳವಡಿಕೆಗೆ ಸಲಹೆ : ರಬ್ಬರ್ ಕಳ್ಳತನದ ಕುರಿತು ದೂರು ದಾಖಲಿಸಲು ಬಂದ ದೂರುದಾರರಿಗೆ ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ 380ಕ್ಕೂ ಅಧಿಕ ಹಳ್ಳಿಗಳು ಬರುತ್ತವೆ. ಕೇವಲ 16 ಮಂದಿ ಸಿಬ್ಬಂದಿಗಳು ಮಾತ್ರ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕಳ್ಳತನ ಪ್ರಕರಣಗಳು ಶೀಘ್ರವೇ ಪತ್ತೆಹಚ್ಚಲು ಸಹಕಾರಿಯಾಗುವಂತೆ ತಮ್ಮ ತಮ್ಮ ಮನೆಗಳಲ್ಲಿ ಸಿಸಿಟಿವಿ ಅಳವಡಿಸಿಕೊಳ್ಳುವಂತೆ ಪಿಎಸ್ಐ ಪ್ರವೀಣ್ ಎಸ್ ಪಿ ಸಲಹೆ ನೀಡಿದ್ದಾರೆಂದು ದೂರುದಾರರಲ್ಲೊಬ್ಬರು ಮಾಹಿತಿ ನೀಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್