ರಿಪ್ಪನ್ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.
ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ.
ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ ಐದು ಸದಸ್ಯರುಗಳ ಆಯ್ಕೆಗಾಗಿ ಭಾನುವಾರ ಚುನಾವಣೆ ನಡೆಸಲಾಗಿತ್ತು.
ಈ ಚುನಾವಣೆಯಲ್ಲಿ ಎಂ ಎಂ ಪರಮೇಶ್ ತಂಡದ ಐದು ಜನ ಹಾಗೂ ಇನ್ನಿತರ ಇಬ್ಬರು ಒಟ್ಟು ಏಳು ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಪರಮೇಶ್ ತಂಡದಿಂದ ಸ್ಪರ್ಧಿಸಿದ್ದ ಎಲ್ಲಾ ಐದು ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದಾರೆ. ಕಳೆದ 25 ವರ್ಷಗಳಿಂದ ರಿಪ್ಪನ್ ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತವು ಎಂಎಂ ಪರಮೇಶ್ವರ್ ನೇತೃತ್ವದಲ್ಲಿ ನಡೆಯುತ್ತಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್