ರಿಪ್ಪನ್‌ಪೇಟೆ ಗ್ರಾ.ಪಂ.ಅಧ್ಯಕ್ಷರಾಗಿ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಆಯ್ಕೆ
ರಿಪ್ಪನ್‌ಪೇಟೆ : ಪಟ್ಟಣದ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯ ಸುಧೀಂದ್ರ ಪೂಜಾರಿ ಆಯ್ಕೆ ಯಾಗಿದ್ದಾರೆ.
21 ಸದಸ್ಯರನ್ನು ಹೊಂದಿರುವ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಧನಲಕ್ಷ್ಮಿ,ಬಿಜೆಪಿ ಬೆಂಬಲಿತ ಸದಸ್ಯೆ ದೀಪಾ ಸುಧೀರ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಆಸೀಫ಼್ ಭಾಷಾ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಸುಧೀಂದ್ರ ಪೂಜಾರಿ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಧನಲಕ್ಷ್ಮಿ 12 ಮತಗಳನ್ನು ಪಡೆದರೆ ದೀಪಾ ಸುಧೀರ್ 9 ಮತಗಳನ್ನು ಪಡೆದಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆಸೀಪ್ ಭಾಷಾ 10 ಮತ್ತು ಸುಧೀಂದ್ರ ಪೂಜಾರಿ 11 ಮತಗಳನ್ನು ಪಡೆದಿದ್ದಾರೆ.
ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಮಲ್ಲಿಕಾರ್ಜುನ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.