ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ

ರಿಪ್ಪನ್‌ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ
ರಿಪ್ಪನ್‌ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು ಅಭಿಷೇಕ,ಕುಂಕುಮಾರ್ಚನೆ ಸೇವೆಯೊಂದಿಗೆ ವಿಶೇಷ ಅಲಂಕಾರ ಪೂಜಾ ಕೈಂಕರ್ಯಗಳು ಜರುಗಲಿದ್ದು ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 15 ಕ್ಕೆ ರಿಪ್ಪನ್‌ಪೇಟೆಯಲ್ಲಿ ರಕ್ತದಾನ ಶಿಬಿರ

ರಿಪ್ಪನ್‌ಪೇಟೆ : ಇಲ್ಲಿನ ರೋಟರಿ ಕ್ಲಬ್ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗ್ರಾಮ ಪಂಚಾಯ್ತಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಅಗಸ್ಟ್ 15 ರಂದು ಮಂಗಳವಾರ ಬೆಳಗ್ಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು’’ ಅಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ದೇವದಾಸ್ ಅಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *