ರಿಪ್ಪನ್ಪೇಟೆ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ
ರಿಪ್ಪನ್ಪೇಟೆ;-ಇದೇ ಅಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ ರಿಪ್ಪನ್ಪೇಟೆಯ ಸಾಗರ ರಸ್ತೆಯಲ್ಲಿನ ತಿಲಕ ನಗರದ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗಸ್ಟ್ 21 ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯ ವರೆಗೆ ಶ್ರೀ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರಿಗೆ ಪವಮಾನ ಆಭಿಷೇಕ,ಲ್ಷೀರಾಭೀಷೇಕ,ಎಳನೀರು ಅಭಿಷೇಕ,ಕುಂಕುಮಾರ್ಚನೆ ಸೇವೆಯೊಂದಿಗೆ ವಿಶೇಷ ಅಲಂಕಾರ ಪೂಜಾ ಕೈಂಕರ್ಯಗಳು ಜರುಗಲಿದ್ದು ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 15 ಕ್ಕೆ ರಿಪ್ಪನ್ಪೇಟೆಯಲ್ಲಿ ರಕ್ತದಾನ ಶಿಬಿರ
ರಿಪ್ಪನ್ಪೇಟೆ : ಇಲ್ಲಿನ ರೋಟರಿ ಕ್ಲಬ್ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಗ್ರಾಮ ಪಂಚಾಯ್ತಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಅಗಸ್ಟ್ 15 ರಂದು ಮಂಗಳವಾರ ಬೆಳಗ್ಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು’’ ಅಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ದೇವದಾಸ್ ಅಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್