ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ|SSF

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ

ರಿಪ್ಪನ್‌ಪೇಟೆ : ಪಟ್ಟಣದ ಎಸ್ ಎಸ್ ಎಫ಼್ ಸಂಘಟನೆ ವತಿಯಿಂದ ತಅಝೀಜುಲ್ ಅರಬ್ಬಿಕ್ ಮದರಸ ವಿದ್ಯಾರ್ಥಿಗಳಿಂದ ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಪಟ್ಟಣದ ನಾಲ್ಕು‌ ಪ್ರಮುಖ ರಸ್ತೆಗಳಲ್ಲಿ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ವಿನಾಯಕ ವೃತ್ತದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ SSF ಸಂಘಟನೆಯಿಂದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ರ‍್ಯಾಲಿಯನ್ನು ಆಯೋಜಿಸಲಾಗಿದೆ.

SSF ಸಂಘಟನೆಯು ಕರ್ನಾಟಕ ರಾಜ್ಯವಲ್ಲದೇ ದೇಶಾದ್ಯಂತ ಕಲೇದ 50 ವರ್ಷಗಳಿಂದ ಯಾವುದೇ ಗುಂಪುಗಾರಿಕೆ ನಡೆಸದೇ ,ಕಳಂಕವಿಲ್ಲದೇ,ಕಪ್ಪುಚುಕ್ಕೆಯಿಲ್ಲದೇ ನಡೆದುಕೊಂಡು ಬರುತ್ತಿರುವ ಸಂಸ್ಥೆಯೆಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು.

ಹಳ್ಳಿ ಹಳ್ಳಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕು,ನಾವೆಲ್ಲಾರೂ ಭಾರತೀಯರು ಎನ್ನುವುದೇ SSF ನ ಮೂಲ ಉದ್ದೇಶವಾಗಿದೆ ಎಂದರು.

ರ‍್ಯಾಲಿ ಪ್ರಾರಂಭಕ್ಕೂ‌ ಮುನ್ನ ಎಲ್ಲಾ ಮಕ್ಕಳನ್ನುದ್ದೇಶಿಸಿ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಮಾತನಾಡಿದರು.

ಗ್ರಾಪಂ ಸದಸ್ಯ ಆಸೀಫ಼್ ಭಾಷಾ , ಜನಪರ ಹೋರಾಟಗಾರ ಆರ್ ಎನ್ ಮಂಜುನಾಥ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

ಈ ಸಂಧರ್ಭದಲ್ಲಿ SSF ಸಂಘಟನೆಯ ರಿಪ್ಪನ್‌ಪೇಟೆ ಶಾಖೆ ಅಧ್ಯಕ್ಷ ಅಜ್ಮಲ್ , ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಮೊಹಮ್ಮದ್ ರಫ಼ಿ,ಕಾರ್ಯದರ್ಶಿ ಶಫ಼ಿವುಲ್ಲಾ ,ಮುಖಂಡರಾದ ಆರ್ ಎಸ್ ಶಂಶುದ್ದೀನ್ , ಹನೀಫ಼್  ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

18 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

20 hours ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

2 days ago