ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ ಕಾಳಿಂಗ ಸರ್ಪ ಪ್ರತ್ಯಕ್ಷ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಪುರಮಠ ಗ್ರಾಮದ ಗೌರಮ್ಮ ಎಂಬುವವರ ಮನೆಯ ಕಾರ್ ಶೆಡ್ ನಲ್ಲಿ ಇಂದು ರಾತ್ರಿ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿದೆ.
ಮನೆಯ ಕಾರ್ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ನೋಡಿದ ಮನೆಯವರು ಭಯಭೀತರಾಗಿ ತತ್ತಕ್ಷಣ ಉರಗ ತಜ್ಞ ಬೆಳ್ಳೂರು ನಾಗರಾಜ್ ಗೆ ಕರೆ ಮಾಡಿದ್ದಾರೆ.
ವಿಷಯ ತಿಳಿಯುತಿದ್ದಂತೆ ತಕ್ಷಣ ಸ್ಥಳಕ್ಕೆ ಧಾವಿಸಿದ ಉರಗ ತಜ್ಞ ಬೆಳ್ಳೂರು ನಾಗರಾಜ್ ಕಾಳಿಂಗ ಸರ್ಪವನ್ನು ಹಿಡಿದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು.
ಈ ಸಂಧರ್ಭದಲ್ಲಿ ಅರಣ್ಯ ಇಲಾಖೆಯ ಅನಿಲ್ ಮತ್ತು ಯೋಗೇಂದ್ರ ಇದ್ದರು.
Biju