ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚುನಾವಣೆಯಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತನೇ ಬಾರಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷರು,ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ಎಂ, ಎಂ ಪರಮೇಶ್ ಮತ್ತು ಉಪಾಧ್ಯಕ್ಷರಾಗಿ ಎನ್ ಪಿ,ರಾಜು ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಚುನಾವಣಾ ಅಧಿಕಾರಿಯಾಗಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ,ಮತ್ತು ಸಹಾಯಕ ಚುನಾವಣೆ ಅಧಿಕಾರಿಯಾಗಿ ಸುರೇಶ್ ರವರು ಕಾರ್ಯನಿರ್ವಹಿಸಿದ್ದಾರೆ.
ನೂತನವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಎಂ ಎಂ ಪರಮೇಶ್ ಹಾಗೂ ಉಪಾಧ್ಯಕ್ಷ ಎನ್ ಪಿ ರಾಜು ರವರಿಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ಕಾಂಗ್ರೆಸ್ ಮುಖಂಡರಾದ ಆರ್ ಎಂ ಮಂಜುನಾಥ್ ಗೌಡ , ಕಲಗೋಡು ರತ್ನಾಕರ್ ,ಬಿ ಪಿ ರಾಮಚಂದ್ರ ,ಅಮೀರ್ ಹಂಜಾ , ಈಶ್ವರಪ್ಪ ಗೌಡ , ಆಸೀಫ಼್ ಭಾಷಾ , ಜಿ ಆರ್ ಗೋಪಾಲಕೃಷ್ಣ ಹಾಗೂ ಇನ್ನಿತರರು ಶುಭಾಶಯ ಕೋರಿದ್ದಾರೆಮ್
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್