ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.
ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಾತೆ ಬದಲಾವಣೆಗಾಗಿ 40 ಸಾವಿರ ರೂಪಾಯಿ ನೀಡಬೇಕು ಎಂದು ಉಪತಹಶೀಲ್ದಾರ್ ಪರಮೇಶ್ವರ್ ನಾಯ್ಕ್ ಡಿಮ್ಯಾಂಡ್ ಇಟ್ಟಿದ್ದರಂತೆ. ಈ ವಿಚಾರವಾಗಿ ಸಂಬಂಧಪಟ್ಟವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿ ಟ್ರ್ಯಾಪ್ ಮಾಡಿದ್ದಾರೆ. ಆರೋಪಿಯು 30 ಸಾವಿರ ಹಣ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಇನ್ನೂ ಈ ವ್ಯವಹಾರದಲ್ಲಿ ಬ್ರೋಕರ್ ಆಗಿ ಕೆಲಸ ನಿರ್ವಹಿಸಿದ್ದ ಪ್ರಕಾಶ್ ಎಂಬವರನ್ನ ಸಹ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.