ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್
ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.

ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ  ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್​ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.




ಖಾತೆ ಬದಲಾವಣೆಗಾಗಿ  40 ಸಾವಿರ ರೂಪಾಯಿ ನೀಡಬೇಕು ಎಂದು ಉಪತಹಶೀಲ್ದಾರ್​ ಪರಮೇಶ್ವರ್ ನಾಯ್ಕ್​ ಡಿಮ್ಯಾಂಡ್ ಇಟ್ಟಿದ್ದರಂತೆ. ಈ ವಿಚಾರವಾಗಿ ಸಂಬಂಧಪಟ್ಟವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿ ಟ್ರ್ಯಾಪ್​ ಮಾಡಿದ್ದಾರೆ. ಆರೋಪಿಯು 30 ಸಾವಿರ ಹಣ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದಿದ್ದಾರೆ. ಇನ್ನೂ ಈ ವ್ಯವಹಾರದಲ್ಲಿ ಬ್ರೋಕರ್ ಆಗಿ ಕೆಲಸ ನಿರ್ವಹಿಸಿದ್ದ ಪ್ರಕಾಶ್​ ಎಂಬವರನ್ನ ಸಹ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ.







ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ - ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ…

8 hours ago

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police…

12 hours ago

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ - ಇಬ್ಬರ ಬಂಧನ Two interstate thieves from…

14 hours ago

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at…

17 hours ago

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence…

17 hours ago

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್! Karnataka government reportedly orders withdrawal…

2 days ago