ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ – 35 ಪ್ರಯಾಣಿಕರು ಆಸ್ಪತ್ರೆಗೆ ದಾಖಲು
ಸಾಗರ : ಸಿಗಂದೂರು ಹೊಳೆಬಾಗಿಲಿನಿಂದ ಸಾಗರಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗೆಣಸಿಕುಣಿ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ವೈರ್ ಬಸ್ ಗೆ ತಾಗಿ ಒಟ್ಟು 45 ಪ್ರಯಾಣಿಕರಲ್ಲಿ 35 ಪ್ರಯಾಣಿಕರಿಗೆ ವಿದ್ಯುತ್ ಶಾಕ್ ಹೊಡೆದಿದೆ.
ಈ ಬಸ್ ನಲ್ಲಿ ಒಟ್ಟು 45 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು, ಅದರಲ್ಲಿ ಹೆಚ್ಚಿನ ಪ್ರಯಾಣಿಕರು ಕಾಲೇಜು ಶಾಲಾ ವಿದ್ಯಾರ್ಥಿಗಳು ಎಂದೂ ಮಾಹಿತಿ ಲಭ್ಯವಾಗಿದೆ.
ಗಾಯಾಳುಗಳು ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೂ, ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲಾಸ್ಪತ್ರೆಯಾದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.