ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ
ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು.

ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ ಸೆರೆಯಾಗಿದೆ. ಇದು ಮಹಿಳೆಯನ್ನು ಬಲಿ ಪಡೆದ ಅದೇ ಚಿರತೆ ಎನ್ನಲಾಗಿದೆ.

ಸೆರೆಹಿಡಿದ ಚಿರತೆಯನ್ನು ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹಧಾಮಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಸಾಗಿಸಿದ್ದಾರೆ.

ಚಿರತೆ ಸೆರೆಯಿಂದ ಬಿಕ್ಕೋನಹಳ್ಳಿ, ಬೀರನಕೆರೆ, ಕೊಮ್ಮನಾಳು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

45 minutes ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

56 minutes ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

3 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

3 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

6 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

6 hours ago