ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ.
ಶಿವಮೊಗ್ಗದಿಂದ ಬೆ.8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆ.9.00 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಾರಿಗೆ ನಿಗಮದ ಹವಾ ನಿಯಂತ್ರಿತ ವಾಹನಗಳ ಪ್ರಯಾಣದರ
ಶಿವಮೊಗ್ಗ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಪ್ರಸ್ತುತ 04 ಹವಾ ನಿಯಂತ್ರಿತ ವಾಹನಗಳು ಕಾರ್ಯಾಚರಣೆಯಾಗುತ್ತಿದ್ದು, ಪ್ರಯಾಣಿಕರು ಹವಾ ನಿಯಂತ್ರಿತ ವಾಹನಗಳಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಪ್ರಯಾಣ ದರವನ್ನು ನಿರ್ಧರಿಸಿ ಬಸ್ಗಳನ್ನು ಚಾಲನೆಗೊಳಿಸಿದೆ.
ಈ ವಾಹನಗಳ ಪ್ರಯಾಣದರ ವಾರದ ದಿನಗಳಾದ ಸೋಮವಾರದಿಂದ ಗುರುವಾರದವರೆಗೆ ರೂ.550/- ಮತ್ತು ವಾರಾಂತ್ಯ ದಿನಗಳಾದ ಶುಕ್ರವಾರ ದಿಂದ ಭಾನುವಾರದವರೆಗೆ ಪ್ರಯಾಣ ದರ ರೂ.600/- ಆಗಿರುತ್ತದೆ. ಶಿವಮೊಗ್ಗದಿಂದ ನಿರ್ಗಮನವಾಗುವ ಸಮಯ ಬೆ:11-00, ಮ:01-00, ರಾ:10-00, ರಾ:11-00 ಮತ್ತು ಬೆಂಗಳೂರಿನಿಂದ ನಿರ್ಗಮನವಾಗುವ ಸಮಯ ಬೆ:10-00, ಬೆ:11-00, ರಾ:11-00, ರಾ:11-30 ಆಗಿದೆ ಎಂದು ಶಿವಮೊಗ್ಗ ವಿಭಾಗದ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್