January 11, 2026

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news

ರಿಪ್ಪನ್‌ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂದಿರದಲ್ಲಿ ಹೊಸನಗರ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ ಸರ್ಕಾರದ ಯೋಜನೆಯನ್ನು ಫಲಾನುಭವಿಗಳಿಗೆ ನೇರವಾಗಿ ದೊರೆಯುವಂತಹ ಕಾರ್ಯಕ್ರಮವನ್ನು ಸಂಘಟನೆಗಳು ಹಮ್ಮಿಕೊಳ್ಳಬೇಕು ಎಂದರು.

ಕಾರ್ಮಿಕ ಸಂಘಟನೆಗಳು ಬಲಿಷ್ಟವಾದಷ್ಟು ಕಾರ್ಮಿಕ ಹಾಗೂ ಶ್ರಮಿಕ ವರ್ಗದ ಏಳಿಗೆಯಾಗುತ್ತದೆ ,ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಂತೆ ಮಾಡಬೇಕಾಗಿದೆ ಎಂದರು.

ಈ ಸಂಧರ್ಭದಲ್ಲಿ ಹಿರಿಯ ಮೇಸ್ತ್ರಿಗಳಿಗೆ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.


ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಸುಂದರ್ ಬಾಬು ರಾಜ್ಯದಲ್ಲಿ ಕಾರ್ಮಿಕರ ವೇತನ, ಕೈಗಾರಿಕೆಗೆ ಉತ್ತೇಜನ, ಸಾಮಾಜಿಕ ಭದ್ರತಾ ವ್ಯವಸ್ಥೆ ಸೇರಿದಂತೆ ಯುವ ಜನತೆಗೆ ವಿವಿಧ ರೀತಿಯ ಕೌಶಲ್ಯ ಯೋಜನೆಗಳನ್ನು ರಾಜ್ಯ ಸರಕಾರ ಜಾರಿಗೆ ತಂದಿದ್ದು, ಕಾರ್ಮಿಕರು ಸದುಪಯೋಗ ಪಡೆಯಬೇಕಾಗಿದೆ,
ಪ್ರತಿಯೊಬ್ಬ ಕಟ್ಟಡ ಕಾರ್ಮಿಕನು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಈ ಸಂಧರ್ಭದಲ್ಲಿ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ,ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಸುಬ್ರಮಣಿ ,ಗ್ರಾಮಾಂತರ ಅಧ್ಯಕ್ಷ ಸಂಜಯ್ ಕುಮಾರ್ , ಗ್ರಾಪಂ ಅಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ,ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್,ಗ್ರಾಪಂ ಸದಸ್ಯರಾದ ಮಧುಸೂಧನ್ ,ಆಸೀಫ಼್ ಭಾಷ ,ಗಣಪತಿ , ಸುಂದರೇಶ್ ,ಚಂದ್ರೇಶ್ ,ನೂತನ ಘಟಕದ ಅಧ್ಯಕ್ಷ ಮಹಮ್ಮದ್ ಹುಸೇನ್ ,ಕಾರ್ಯದರ್ಶಿ ರಮೇಶ್ ಮುಖಂಡರಾದ ರವೀಂದ್ರ ಕೆರೆಹಳ್ಳಿ  ಹಾಗೂ ಇನ್ನಿತರರಿದ್ದರು.

About The Author

Leave a Reply

Your email address will not be published. Required fields are marked *

Exit mobile version