w
Headlines
Home » ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸರ್ವೇ ಇಲಾಖೆಯ ಕಮಿಷನ್ ಅವರಿಗೆ ಕರೆ ಮಾಡಿ ಈ ರೀತಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿರುವ ಸರ್ವೇ ನೌಕರರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.