January 11, 2026

ಸಾಗರದ ಬೆಥನಿ ಕಾನ್ವೆಂಟ್ ನಲ್ಲಿ ರಕ್ಷಾ ಬಂಧನ ಆಚರಣೆ ವಿವಾದ – ಪೊಲೀಸರ ಮಧ್ಯಸ್ಥಿಕೆಯಿಂದ ಅಂತ್ಯ|sagar news

ಸಾಗರ : ಇಲ್ಲಿನ ಮಂಕಳಲೆ ಸಂತ ಜೊಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ರಕ್ಷಾಬಂಧನ ಆಚರಣೆಗೆ ಸಂಬಂಧಪಟ್ಟಂತೆ ಮುಖ್ಯ ಶಿಕ್ಷಕರು ಮತ್ತು ಪೋಷಕರ ನಡುವೆ ವಾಗ್ವಾದ ನಡೆಯಿತು.

ಬುಧವಾರ ರಕ್ಷಾಬಂಧನ ಹಿನ್ನೆಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿಕೊಂಡಿದ್ದಾರೆ.

ಓರ್ವ ವಿದ್ಯಾರ್ಥಿನಿ ವಿದ್ಯಾಥಿಯೊಬ್ಬನಿಗೆ ರಾಖಿ ಕಟ್ಟಿದ್ದಾಳೆ. ಎಲ್ಲರ ಎದುರಿಗೆ ರಾಖಿ ಕಟ್ಟಿದ್ದರಿಂದ ಬಾಲಕ ಮಾನಸಿಕವಾಗಿ ಬೇಸರಗೊಂಡಿದ್ದಾನೆ. ಬಾಲಕನಿಗೆ ರಾಖಿ ಕಟ್ಟಿದಾಗ ಉಳಿದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಬಾತ್‌ರೂಮ್‌ಗೆ ಹೋಗಿ ಬಾಗಿಲು ಹಾಕಿಕೊಂಡು ಅಳಲಾರಂಭಿಸಿದನು.

ಆಗ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವರ್ಗ ವಿದ್ಯಾರ್ಥಿಯನ್ನು ಸಮಾಧಾನಪಡಿಸಿ, ಬಾಲಕನ ಕೈಗೆ ಕಟ್ಟಿದ್ದ ರಾಖಿಯನ್ನು ತೆಗೆಸಿದ್ದಾರೆ. ಜೊತೆಗೆ ಎಲ್ಲ ವಿದ್ಯಾರ್ಥಿಗಳು ಪರಸ್ಪರ ಕಟ್ಟಿಸಿಕೊಂಡ ರಾಖಿಯನ್ನು ಬಿಚ್ಚಿಸಿ ಕಳಿಸಿದ್ದರು. ಆದರೂ ಬೆಳಿಗ್ಗೆ 11 ಗಂಟೆವರೆಗೆ ಮಕ್ಕಳನ್ನು ಹೊರಗೆ ನಿಲ್ಲಿಸುವ ಶಿಕ್ಷೆಯನ್ನು ನೀಡಲಾಗಿತ್ತು.

ಈ ವಿಷಯವನ್ನು ವಿದ್ಯಾರ್ಥಿಗಳು ಮನೆಗೆ ಹೋಗಿ ಪೋಷಕರಿಗೆ ತಿಳಿಸಿದ್ದರು. ಗುರುವಾರ ಪೋಷಕರು ಮತ್ತು ಹಿಂದೂಪರ ಸಂಘಟನೆಗಳು ಶಾಲೆಗೆ ಆಗಮಿಸಿ ರಾಖಿ ಬಿಚ್ಚಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಪರ ಸಂಘಟನೆಯ ಮುಖಂಡರು ಕಟ್ಟಿದ್ದ ರಾಖಿಯನ್ನು ಬಿಚ್ಚಿಸಿದ್ದ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕ ವರ್ಗವನ್ನು ತರಾಟೆಗೆ ತೆಗೆದುಕೊಂಡರು.

ಸ್ಥಳಕ್ಕೆ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯ್ಕ್, ಸರ್ಕಲ್ ಇನ್ಸ್‌ಪೆಕ್ಟರ್ ಸೀತಾರಾಮ್, ಕೃಷ್ಣಪ್ಪ, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಮುಖ್ಯ ಶಿಕ್ಷಕಿ ರಾಖಿ ತೆಗೆಸಿದಕ್ಕೆ ಕ್ಷಮೆ ಕೋರಿದ ಹಿನ್ನೆಲೆಯಲ್ಲಿ ಘಟನೆಯನ್ನು ಸಮಾಪ್ತಿಗೊಳಿಸಲಾಯಿತು.

About The Author

Leave a Reply

Your email address will not be published. Required fields are marked *

Exit mobile version