ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ.
ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ ಹೇರಿದ್ದಾರೆ. ಇದು ವಾಗ್ವಾದಕ್ಕೆ ದಾರಿಯಾಗಿದೆ.
‘ಆಹಾರ ಮೇಳದ ನಿಯಮಗಳ ಬಗ್ಗೆ ಮೊದಲೇ ಸೂಚಿಸಲಾಗಿತ್ತು. ಆದರೂ ಮಾಂಸಾಹಾರ ತಂದಿರುವುದು ನಿಯಮದ ಉಲ್ಲಂಘನೆ’ ಎಂದು ಉಪನ್ಯಾಸಕರು ಹೇಳಿದ್ದಾರೆ.
ಆಗ ವಿದ್ಯಾರ್ಥಿನಿಯರು ‘ಆಹಾರ ಮೇಳದಲ್ಲಿ ಮಾಂಸಹಾರಕ್ಕೆ ನಿರ್ಬಂಧ ಹೇರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದಾಗ ‘ನಾವು ಹೇಳಿದ್ದನ್ನು ಕೇಳಬೇಕು’ ಎಂದು ಉಪನ್ಯಾಸಕರು ತಾಕೀತು ಮಾಡಿದ್ದಾರೆ.
ನಂತರ ಆಹಾರ ಮೇಳದಲ್ಲಿ ಮಾಂಸಹಾರಕ್ಕೆ ಅವಕಾಶ ನೀಡಲಾಯಿತು. ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕರ ನಡುವೆ ನಡೆದ ವಾಗ್ವಾದದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್