ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕಲ್ಲುಹಳ್ಳ ಸೇತುವೆ ಬಳಿ ಆಯತಪ್ಪಿ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ಪೇಟೆ ಸಮೀಪ ಇರುವ ಕಲ್ಲುಹಳ್ಳ ಸೇತುವೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.
ಮೃತ ಯುವಕನನ್ನ ಹೊಸನಗರ ದ್ಯಾವರ್ಸದ ನಿವಾಸಿ ರಾಘು ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ಯುವಕ ಸೇತುವೆ ಬಳಿ ನಡೆದುಕೊಂಡು ಹೋಗುವದನ್ನ ಸ್ಥಳೀಯರು ಗಮನಿಸಿದ್ದಾರೆ. ಆನಂತರ ಯುವಕ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆ ಹೇಗೆ ನಡೆಯಿತು ಎಂಬುದು ಸ್ಪಷ್ಟವಾಗಿಲ್ಲ.
ಸ್ಥಳೀಯರು ಹೇಳುವಂತೆ, ಯುವಕ ಆಯತಪ್ಪಿ ಬಿದ್ದಿದ್ದಾನೆ ಎನ್ನಲಾಗಿದೆ. ಸೇತುವೆಯಿಂದ ಸುಮಾರು 50 ಅಡಿ ಆಳಕ್ಕೆ ಬಿದ್ದಿದ್ದ ಯುವಕನಿಗೆ ಕಲ್ಲುಗಳು ಬಡಿದು ಸಾವನ್ನಪ್ಪಿದ್ದಾರೆ.
ಹೊಸನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.