ಒಂದೇ ಸ್ಥಳದಲ್ಲಿ ಎರಡು ಅಪಘಾತಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದೆ. ಪಕ್ಕದಲ್ಲೇ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ರೀತಿ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತಗಳಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಅರೋಡಿ ಗ್ರಾಮದ ಸೇತುವೆಯ ಮೇಲೆ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ ಅದೇ ಸೇತುವೆಯ ಬಳಿಯಲ್ಲಿ ಭತ್ತ ತುಂಬಿದ್ದ ಮತ್ತೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಇಂದು ಸಂಜೆಯ ವೇಳೆ ಅರೋಡಿ ಸಮೀಪದ ಸೇತುವೆ ಮೇಲೆ ಲಾರಿಯೊಂದು ತಡೆಗೋಡೆಗೆ ಡಿಕ್ಕಿಯಾಗಿತ್ತು ಈ ಹಿನ್ನಲೆಯಲ್ಲಿ ಲಾರಿಯನ್ನು ತೆರವುಗೊಳಿಸುವ ವೇಳೆ ಮತ್ತೊಂದು ಲಾರಿ ಅದೇ ಸ್ಥಳದಲ್ಲಿ ಅಪಘಾತವಾಗಿದೆ.ನೋಡನೋಡುತಿದ್ದಂತೆ ಎರಡು ಅಪಘಾತಗಳು ನಡೆದಿದ್ದು ಒಂದು ಲಾರಿಯನ್ನು ಮೇಲೆತ್ತುವ ವೇಳೆ ಮತ್ತೊಂದು ಲಾರಿ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ
ಅರೋಡಿ ಸಮೀಪದ ಸೇತುವೆಯೊಂದಕ್ಕೆ ಲಾರಿಯೊಂದು ಡಿಕ್ಕಿಯಾಗಿತ್ತು ಈ ಹಿನ್ನಲೆಯಲ್ಲಿ ಕ್ರೇನ್ ಸಹಾಯದಿಂದ ಲಾರಿಯನ್ನು ಎಳೆಯುತಿದ್ದಾಗ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಮತ್ತೊಂದು ಲಾರಿ ನಿಯಂತ್ರಣಕ್ಕೆ ಸಿಗದೇ ಕಂದಕಕ್ಕೆ ಉರುಳಿದೆ.
ಘಟನೆಯಲ್ಲಿ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್