ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ :

ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ;

ಗಿರೀಶ್‌ ಬಿ.ಸಿ – ಹೊಸನಗರ ಪೊಲೀಸ್‌ ಠಾಣೆಯಿಂದ ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ

ಜೆ.ಲಕ್ಷ್ಮಣ್‌ – ಶಿಕಾರಿಪುರ ಗ್ರಾಮಾಂತರ ಠಾಣೆಯಿಂದ ಬೆಂಗಳೂರಿನ ನಂದಿನಿ ಲೇಔಟ್‌

ಅಶ್ವಥಗೌಡ.ಜೆ – ತೀರ್ಥಹಳ್ಳಿ ಪೊಲೀಸ್‌ ಠಾಣೆಯಿಂದ ಬೆಂಗಳೂರನ ಜ್ಞಾನಭಾರತಿ ಠಾಣೆ

ಪ್ರವೀಣ್‌ ಜಿ. ನೀಲಮ್ಮನವರ್‌ – ತೀರ್ಥಹಳ್ಳಿಯ ಮಾಳೂರು ಠಾಣೆಯಿಂದ ಹುಬ್ಬಳ್ಳಿ ಧಾರವಾಡ ಗೋಕುಲ್‌ ರೋಡ್‌ ಠಾಣೆ

ರಾಘವೇಂದ್ರ ಕಾಂಡಿಕೆ – ಭದ್ರಾವತಿ ನಗರ ವೃತ್ತದಿಂದ ಚಿತ್ರದುರ್ಗದ ಹಿರಿಯೂರು ಠಾಣೆಗೆ

ರವಿ ಎನ್‌.ಎಸ್‌ – ವಿನೋಬನಗರ ಪೊಲೀಸ್‌ ಠಾಣೆಯಿಂದ ದಾವಣಗೆರೆ ಜಿಲ್ಲೆ ನ್ಯಾಮತಿ ಠಾಣೆಗೆ

ಪ್ರವೀಣ್‌ ಕುಮಾರ್‌.ವಿ – ಸಾಗರ ಗ್ರಾಮಾಂತರ ಠಾಣೆಯಿಂದ ಹಾವೇರಿ ಜಿಲ್ಲೆ ರಾಣೇಬೆನ್ನೂರು ಗ್ರಾಮಾಂತರ ಠಾಣೆಗೆ

ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿ ಬಂದವರು :

ಶ್ರೀಶೈಲಕುಮಾರ್‌ – ರಾಜ್ಯ ಗುಪ್ತವಾರ್ತೆಯಿಂದ ಭದ್ರಾವತಿ ನಗರ ವೃತ್ತ

ಮಹಾಬಲೇಶ್ವರ್‌ ಎಸ್‌.ನಾಯಕ್‌ – ಭಟ್ಕಳ ಗ್ರಾಮಾಂತರ ಠಾಣೆಯಿಂದ ಸಾಗರ ಗ್ರಾಮಾಂತರ ಪೊಲೀಸ್‌ ಠಾಣೆಗೆ

ರುದ್ರೇಗೌಡ ರೇವಣಗೌಡ ಪಾಟೀಲ್‌ – ಹಾವೇರಿ ಜಿಲ್ಲೆ ಹಿರೇಕೆರೂರು ಠಾಣೆಯಿಂದ ಶಿವಮೊಗ್ಗದ ವಿನೋಬನಗರ ಠಾಣೆಗೆ

ಗುರಣ್ಣ ಎಸ್‌.ಹೆಬ್ಬಾಳ್‌ – ಭಾಲ್ಕಿ ನಗರ ಠಾಣೆಯಿಂದ ಹೊಸನಗರ ಠಾಣೆಗೆ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

3 hours ago

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ

ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…

19 hours ago

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…

21 hours ago

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

2 days ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

2 days ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

2 days ago