POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ|arrested

ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ


ತೀರ್ಥಹಳ್ಳಿ : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ  ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಸಂಬಂಧ ಸುನಿಲ್‌ (34) ಮತ್ತು ಕಾರ್ತಿಕ್‌ (29) ಎಂಬುವವರನ್ನು ಬಂಧಿಸಲಾಗಿದೆ. ಡಿವೈಎಸ್‌ಪಿ ಗಜಾನನ ವಾಮನ ಸುತಾರ, ಇನ್ಸ್‌ಪೆಕ್ಟರ್‌ ಅಶ್ವಥ್‌ ಗೌಡ, ಸಬ್‌ ಇನ್ಸ್‌ಪೆಕ್ಟರ್‌ ಗಾದಿ ಲಿಂಗಪ್ಪಗೌಡರ್‌ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. 

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.