ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ.
ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಕಿಡಿಗೇಡಿಗಳು ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹೊಳೆಹೊನ್ನೂರು ಗ್ರಾಮಸ್ಥರು ಖಂಡನೆ ವ್ಯಕ್ತಪಡಿಸಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.