ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ.
ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್ ಪಿ ಮಿಥುನ್ ಕುಮಾರ್ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಬಂಧಿತ ಆರೋಪಿಗಳು ಎಂದು ತಿಳಿಸಿದ್ದಾರೆ.
ಆರೋಪಿಗಳು ಚಿತ್ರದುರ್ಗ ಸಮೀಪ ಪಂಡ್ರಹಳ್ಳಿಯವರಾಗಿದ್ದು, ಕೃಷಿ ಕೆಲಸ ಮಾಡಿಕೊಂಡಿದ್ದವರು. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಈ ಆರೋಪಿಗಳು ಈ ದುಷ್ಕೃತ್ಯವನ್ನು ಎಸಗಿದ್ದಾರೆ.
ಪ್ರತಿಮೆ ಧ್ವಂಸ ಮಾಡಿದ ಇಬ್ಬರು ನಂತರ ಶಿವಮೊಗ್ಗಕ್ಕೆ ಹೋಗಿ ವಾಪಸ್ ಹಳ್ಳಿಗೆ ಹೋಗಿದ್ದರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ವಿಚಾರಣೆ ವೇಳೆ ಇನ್ನಷ್ಟು ವಿಷಯ ತಿಳಿದು ಬರಲಿದೆ ಎಂದು ಎಸ್ ಪಿ ತಿಳಿಸಿದ್ದಾರೆ.