ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ.
ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ.
ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.