ಹೊಸನಗರ : ಹುಲ್ಲಿನ ಬಣವೆಗೆ ತಗುಲಿದ ಬೆಂಕಿ – ನಷ್ಟ..!!
ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಂಡ ಗ್ರಾಮದ ಹಾಲಪ್ಪ ಗೌಡ ಬಿನ್ ರುದ್ರಪ್ಪ ಗೌಡರಿಗೆ ಸೇರಿದ ಒಣ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪಕ್ಕದಲ್ಲಿದ್ದ ಕೊಟ್ಟಿಗೆಗೂ ಬೆಂಕಿ ಹೊತ್ತಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದ್ದು ಸುಮಾರು ಅಂದಾಜು 50 ಸಾವಿರ ರೂಪಾಯಿಯಷ್ಟು ನಷ್ಟವಾಗಿದೆ.
ಆಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಗ್ರಾಮ ಪಂಚಾಯತಿಯ ಸಿಬ್ಬಂದಿಯಾದ ಧರ್ಮಪ್ಪ, ಚಂದ್ರಶೇಖರ್, ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಕೌಶಿಕ್ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲಿಸಿ ಆನಾಹುತವಾದ ಬಗ್ಗೆ ಕಂದಾಯ ಇಲಾಖೆಗೆ ವರದಿ ಸಲ್ಲಿಸಿ ಸರ್ಕಾರದಿಂದ ಸಿಗುವ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.q