w
Headlines
Home » ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

ಐವರಿಗೆ ಚಾಕು ಇರಿತ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಹಲ್ಲೆ, ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಭತ್ತು ಮಂದಿ ಆರೋಪಿಗಳನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ.

ಪವನ್ , ಮಂಜುನಾಥ್, ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ್, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಪವನ್‌ ಮತ್ತು ಕಿರಣ್‌ ಎಂಬ ಸ್ನೇಹಿತರ ಮಧ್ಯೆ ವೈಷಮ್ಯವಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಗುರುವಾರ ರಾತ್ರಿ ನೇತಾಜಿ ಸರ್ಕಲ್‌ನಲ್ಲಿ ಗಲಾಟೆಯಾಗಿತ್ತು. ಗಲಾಟೆ ವೇಳೆ ಪವನ್‌ ಮತ್ತು ಆತನ ಜೊತೆಗಿದ್ದವರು, ಕಿರಣ್‌ ಮತ್ತು ಆತನ ಸ್ನೇಹಿತರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದರು. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರೆಲ್ಲ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದು ಕೆಲವೇ ಹೊತ್ತಿನಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.